ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಆಗ್ರಹಿಸಿ ಅ.2ರ ಗಾಂಧಿ ಜಯಂತಿಯಂದು ಒಂದು ದಿನದ ಮಟ್ಟಿಗೆ ನಗರದ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಮುಖಂಡ ವಸಂತ್ ಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣೆಗೆ ಹತ್ತು ಹಲವು ಹೋರಾಟಗಳು ನಡೆಸಿದ್ದರು ಸಹ ಯಾವುದೇ ರೀತಿಯ ಕ್ರಮಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆಗಳು ಕಲುಷಿತಗೊಳ್ಳುತ್ತಿರುವುದರ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಲು ಬೆಂಗಳೂರಿನ ಪೀಣ್ಯಾಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯನ್ನ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ನಂತರ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ಸತೀಶ್ ಮಾತನಾಡಿ, ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಶುದ್ಧ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥತಿ ಬಂದಿದೆ. ನಮ್ಮ ಹೋರಾಟ ಮಹಾತ್ಮ ಗಾಂಧೀಜಿ ಅವರ ತತ್ವದ ಆಧಾರದ ಮೇಲೆ ನಡೆಯುತ್ತದೆ ನಮಗೆ ಶಾಶ್ವತ ಪರಿಹಾರ ಸಿಗುವವರೆಗೆ ಹೋರಾಟ ಮುಂದುವರಿಯುತ್ತಲೇ ಇರುತ್ತದೆ ಎಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಪ್ರಮಿಳಾ ಮಹದೇವ್, ರೈತ ಮುಖಂಡರಾದ ವಿಜಯಕುಮಾರ್, ರಮೇಶ್, ಮುನಿಕೃಷ್ಣಪ್ಪ, ಕಾಳೇಗೌಡರು, ಚಂದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…