ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ ಹಾಕಲು ಮುಂದಾಗಿರುವ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಮಾರ್ಚ್ 7 ರಂದು ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು ಮಣ್ಣು ತುಂಬಿ ಮುಚ್ಚುವುದಾಗಿ ಹೇಳಿದ್ದಾರೆ.
ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಮಾರ್ಚ್ 7 ರಂದು ಕೆರೆಗೆ ಕೊಳಚೆ ನೀರು ಹರಿದುಬರುವ ರಾಜಕಾಲುವೆಯನ್ನು ಕಲ್ಲು, ಮಣ್ಣುಗಳಿಂದ ಮುಚ್ಚುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಾವಿರಾರು ಜನರೊಂದಿಗೆ ಸೇರಿ ರಾಜಕಾಲುವೆ ಮುಚ್ಚಲಾಗುವುದು ಎಂದು ವೇದಿಕೆ ಮುಖಂಡ ಜಿಂಕೆಬಚ್ಚಹಳ್ಳಿ ಸತೀಶ್ ತಿಳಿಸಿದರು.
ತ್ಯಾಜ್ಯ ನೀರನ್ನು ಶುದ್ದೀಕರಿಸಿ ಕೆರೆಗ ಬಿಡಬೇಕೆಂದು ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಗಿದೆ ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ತೆಗೆದೆಕೊಂಡಿಲ್ಲ, ಅಧಿಕಾರಿಗಳು STP ಘಟಕ ನಿರ್ಮಾಣಕ್ಕೆ ಕಾರ್ಯಾದೇಶ ಹೊರಡಿಸಲು ಇನ್ನೂ ಮೀನಾಮೇಷ ಎಣಿಸಲಾಗುತ್ತಿದೆ. ಕೆಳಹಂತದಿಂದ ಮೇಲಾಧಿಕಾರಿಗಳ ವರೆಗೂ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್‌ಗಳಲ್ಲಿ ಮಣ್ಣು ತಂದು ರಾಜಕಾಲುವೆ ಮುಚ್ಚುವುದ್ದಾಗಿ ಹೇಳಿದರು, ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚಿಕ್ಕಣ್ಣಪ್ಪ, ಸಂದೇಶ್, ಲೋಕೇಶ್, ವಿಜಯ್ ವಸಂತಕುಮಾರ್, ಕಾಳೇಗೌಡ, ಗೋಪಾಲ್, ಕೃಷ್ಣ, ಚನ್ನೇಗೌಡ, ಸಂತೋಷ್, ರಮೇಶ್ ಇತರರು ಇದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…