ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ ಕಂದಾಯ ಇಲಾಖೆಯ ನಿವೃತ್ತ ನೌಕರನೊಬ್ಬ ವಸತಿ ಬಡಾವಣೆ ನಿರ್ಮಿಸಲು ಸರ್ಕಾರಿ ಖರಾಬು ಜಮೀನನ್ನು ಕಬಳಿಸಲು ಹುನ್ನಾರ ನೆಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕುರುಡರಂತೆ ಕಂಡರು ಕಾಣದಂತೆ ಇದ್ದಾರೆ ಎಂದು ಕರವೇ ಸಂಘಟನೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಆರೋಪಿಸಿದ್ದಾರೆ.
ನಗರದ ಹೊರವಲಯದ ಐತಿಹಾಸಿಕ ಹಿನ್ನೆಲೆ ಇರುವ ಆರ್ಕಾವತಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಬಂಡೆ ಹಾಗು ಖರಾಬು ಜಾಗದಲ್ಲಿ ಇದ್ದಂತಹ ಕಲ್ಲು ಬಂಡೆಯನ್ನು ರಾತ್ರಿ ವೇಳೆ ಗ್ರಾಮದ ಜನರು ನಿದ್ರೆಯ ಸಮಯದಲ್ಲಿ ಸ್ಪೋಟಿಸಿ ಕಲ್ಲುಗಳನ್ನು ಬೇರೆಕಡೆ ತೆರವು ಮಾಡಿ ಆ ಜಾಗಕ್ಕೆ ಮಣ್ಣು ತುಂಬಿದ್ದು, ಆ ಜಾಗದಲ್ಲಿ ಇದ್ದಂತಹ ಪುರಾತನ ಕಾಲದ ಮರಗಳನ್ನು ಕಡಿದು ಹಾಕಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡಿ, ರಾಜ ಕಾಲುವೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ಬಡಾವಣೆ ತಲೆ ಎತ್ತುತ್ತಿವೆ ಎಂದು ಆರೋಪಿಸಿದ ರಾಜಘಟ್ಟ ರವಿ, ಬಫರ್ ಜೋನ್ ಗಳನ್ನು ತಿಂದು ಹಾಕುತ್ತಿದ್ದಾರೆ. ಲೇಔಟ್ ಮಾಫಿಯಾಗಳು ಕೆರೆ ಅಂಗಳ ಕೆರೆ ಕೆಳಗೆ ವಸತಿಗೆ ಯೋಗ್ಯವೇ ಅಲ್ಲದ ಜಮೀನುಗಳನ್ನು ನಿವೇಶನ ವಿಂಗಡಣೆ ಮಾಡಿ ಹೆಚ್ಚು ಹಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂತಹವರ ಬಗ್ಗೆ ಮಾಹಿತಿ ತಿಳಿದಿದ್ದರು ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಮಾಹಿತಿ ಕೇಳಿದರೆ ಉಢಾಷೆ ಉತ್ತರ ನೀಡುತ್ತಾರೆ. ಸರ್ಕಾರಿ ಜಾಗಗಳನ್ನು ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…