ಅರ್ಕಾವತಿ ನದಿ ಪಾತ್ರದ ಸರ್ಕಾರಿ ಜಾಗ ಕಬಳಿಕೆ ಆರೋಪ: ಸರ್ಕಾರಿ ಭೂಮಿ ರಕ್ಷಿಸುವಂತೆ ಕರವೇ ರಾಜಘಟ್ಟ ರವಿ ಆಗ್ರಹ

ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ ಕಂದಾಯ ಇಲಾಖೆಯ ನಿವೃತ್ತ ನೌಕರನೊಬ್ಬ ವಸತಿ ಬಡಾವಣೆ ನಿರ್ಮಿಸಲು ಸರ್ಕಾರಿ ಖರಾಬು ಜಮೀನನ್ನು ಕಬಳಿಸಲು ಹುನ್ನಾರ ನೆಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕುರುಡರಂತೆ ಕಂಡರು ಕಾಣದಂತೆ ಇದ್ದಾರೆ ಎಂದು ಕರವೇ ಸಂಘಟನೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ‌ಆರೋಪಿಸಿದ್ದಾರೆ.

ನಗರದ ಹೊರವಲಯದ ಐತಿಹಾಸಿಕ ಹಿನ್ನೆಲೆ ಇರುವ ಆರ್ಕಾವತಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಬಂಡೆ ಹಾಗು ಖರಾಬು ಜಾಗದಲ್ಲಿ ಇದ್ದಂತಹ ಕಲ್ಲು ಬಂಡೆಯನ್ನು ರಾತ್ರಿ ವೇಳೆ ಗ್ರಾಮದ ಜನರು ನಿದ್ರೆಯ ಸಮಯದಲ್ಲಿ ಸ್ಪೋಟಿಸಿ ಕಲ್ಲುಗಳನ್ನು ಬೇರೆಕಡೆ ತೆರವು ಮಾಡಿ ಆ ಜಾಗಕ್ಕೆ ಮಣ್ಣು ತುಂಬಿದ್ದು, ಆ ಜಾಗದಲ್ಲಿ ಇದ್ದಂತಹ ಪುರಾತನ ಕಾಲದ ಮರಗಳನ್ನು ಕಡಿದು ಹಾಕಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡಿ, ರಾಜ ಕಾಲುವೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ಬಡಾವಣೆ ತಲೆ ಎತ್ತುತ್ತಿವೆ ಎಂದು ಆರೋಪಿಸಿದ ರಾಜಘಟ್ಟ ರವಿ, ಬಫರ್ ಜೋನ್ ಗಳನ್ನು ತಿಂದು ಹಾಕುತ್ತಿದ್ದಾರೆ. ಲೇಔಟ್ ಮಾಫಿಯಾಗಳು ಕೆರೆ ಅಂಗಳ ಕೆರೆ ಕೆಳಗೆ ವಸತಿಗೆ ಯೋಗ್ಯವೇ ಅಲ್ಲದ ಜಮೀನುಗಳನ್ನು ನಿವೇಶನ ವಿಂಗಡಣೆ ಮಾಡಿ ಹೆಚ್ಚು ಹಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂತಹವರ ಬಗ್ಗೆ ಮಾಹಿತಿ‌ ತಿಳಿದಿದ್ದರು ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಮಾಹಿತಿ ಕೇಳಿದರೆ ಉಢಾಷೆ ಉತ್ತರ ನೀಡುತ್ತಾರೆ. ಸರ್ಕಾರಿ ಜಾಗಗಳನ್ನು ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ‌ ನೀಡಿದ್ದಾರೆ.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

  ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…

11 minutes ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

23 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago