ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.
ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.
ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ.
ಪದವಿ, ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.
ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…