Categories: ತುಮಕೂರು

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ


ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ-ಜಿ ರಾಮ್ ಜಿ ಯೋಜನೆ) ಜನರಿಗೆ ಗ್ರಾಮೀಣ ಶೈಲಿಯಲ್ಲಿಯೇ ಬೀದಿನಾಟಕದ ಮೂಲಕ ಸ್ಥಳೀಯವಾಗಿ ಉದ್ಯೋಗ ದೊರಕುವ ಉದ್ದೇಶದಿಂದ ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಾಜಶೇಖರ್ ಅವರು ತಿಳಿಸಿದರು.

ತಾಲ್ಲೂಕಿನ ಚೌಳಕಟ್ಟೆ ಗ್ರಾಮ ಪಂಚಾಯಿತಿ ಸಮೀಪದ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಸೆಪ್ಟಂಬರ್ 15 ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.

ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ.

ಈ ವೇಳೆ ಮಾನ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಂಜಿತ ರವರು, ಕಾರ್ಯದರ್ಶಿಗಳಾದ ರಂಗಸ್ವಾಮಿ ರವರು,ಕರಾವಸೂಲಿಕಾರರು ಬಾಲರಾಜು, ತಾಂತ್ರಿಕ ಸಹಾಯಕರಾದ ಪ್ರಕಾಶ್, ಡಿಇಒ ವೆಂಕಟೇಶ್, ಬಿಎಫ್ ಟಿ ಸತೀಶ್ , ಟಿಆರ್ ಎಂ ದುರ್ಗಮ್ಮ, ಪಂಚಾಯಿತಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು, ಕಲಾವಿದರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.

Ramesh Babu

Journalist

Recent Posts

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

18 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

21 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

2 days ago