ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್(https://sevasindhu.Karnataka.gov.in) ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರು ಆರ್ಥಿಕ ಅಭಿವೃದ್ದಿ ಹೊಂದಲು ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.
ಯೋಜನೆಗಳ ವಿವರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ (ಘಟಕ ವೆಚ್ಚ ರೂ.1.00 ಲಕ್ಷ). ಉಧ್ಯಮ ಶೀಲತಾ ಯೋಜನೆ (ಘಟಕ ವೆಚ್ಚ ರೂ.2.00 ಲಕ್ಷ), ಉಧ್ಯಮ ಶೀಲತಾ ಯೋಜನೆ (ಸರಕು ಸಾಗಾಣಿಕೆ, ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ). ಪರಿಶಿಷ್ಟ ಜಾತಿಗೆ ಘಟಕ ವೆಚ್ಚ ರೂ 2.00ಲಕ್ಷ, ಪರಿಶಿಷ್ಟ ಪಂಗಡಕ್ಕೆ ಘಟಕ ವೆಚ್ಚ ರೂ 4.00ಲಕ್ಷ. ಪರಿಶಿಷ್ಟ ಪಂಗಡಕ್ಕೆ ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿಪಡಿಸಿದ ಗುರಿಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ದೂ.ಸಂ 080 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ 080-27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ 080-27623681. ಹೊಸಕೋಟೆ ತಾಲ್ಲೂಕು ದೂ.ಸಂ 080-27931528. ನೆಲಮಂಗಲ ತಾಲ್ಲೂಕು ದೂ.ಸಂ 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…