ಅಲೆಮಾರಿ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್(https://sevasindhu.Karnataka.gov.in) ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರು ಆರ್ಥಿಕ ಅಭಿವೃದ್ದಿ ಹೊಂದಲು ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.

ಯೋಜನೆಗಳ ವಿವರ

ಪರಿಶಿಷ್ಟ ಜಾತಿ ‌ಮತ್ತು ಪರಿಶಿಷ್ಟ ಪಂಗಡಕ್ಕೆ ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ (ಘಟಕ ವೆಚ್ಚ ರೂ.1.00 ಲಕ್ಷ). ಉಧ್ಯಮ ಶೀಲತಾ ಯೋಜನೆ (ಘಟಕ ವೆಚ್ಚ ರೂ.2.00 ಲಕ್ಷ), ಉಧ್ಯಮ ಶೀಲತಾ ಯೋಜನೆ (ಸರಕು ಸಾಗಾಣಿಕೆ, ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ). ಪರಿಶಿಷ್ಟ ಜಾತಿಗೆ ಘಟಕ ವೆಚ್ಚ ರೂ 2.00ಲಕ್ಷ, ಪರಿಶಿಷ್ಟ ಪಂಗಡಕ್ಕೆ ಘಟಕ ವೆಚ್ಚ ರೂ 4.00ಲಕ್ಷ. ಪರಿಶಿಷ್ಟ ಪಂಗಡಕ್ಕೆ ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ‌ ಹಾಗೂ ಗಂಗಾ ಕಲ್ಯಾಣ ಯೋಜನೆ‌‌.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿಪಡಿಸಿದ ಗುರಿಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ದೂ.ಸಂ 080 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ 080-27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ 080-27623681. ಹೊಸಕೋಟೆ ತಾಲ್ಲೂಕು ದೂ.ಸಂ 080-27931528. ನೆಲಮಂಗಲ ತಾಲ್ಲೂಕು ದೂ.ಸಂ 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

2 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

14 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

16 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

18 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

18 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

20 hours ago