ಅಲ್ಝೈಮರ್‌ ಬಗ್ಗೆ ಜಾಗೃತಿ ಅಗತ್ಯ: ಪ್ರೇಮ್‌ಕುಮಾರ್ ರಾಜ್

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಸ್ಮರಣಶಕ್ತಿ ಕುಂಠಿತಗೊಳ್ಳುವ ಅಲ್ಝೈಮರ್ ಹಾಗೂ ಡಿಮೆನ್ಶಿಯಾ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರೇಮ್‌ಕುಮಾರ್ ರಾಜ್ ಹೇಳಿದರು.

ವಿಶ್ವ ಅಲ್ಝೈಮರ್ ದಿನಾಚರಣೆ ಅಂಗವಾಗಿ ಸೆ.21ರಂದು ನಗರದ ಟಿಬಿ ಸರ್ಕಲ್‌ನಿಂದ ತಾಲೂಕು ಆಸ್ಪತ್ರೆಗೆ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಅಲ್ಝೈಮರ್ ಜಾಗೃತಿ ನಡಿಗೆಯಲ್ಲಿ ಅವರು ಮಾತನಾಡಿದರು.

ಅಲ್ಝೈಮರ್ ಸಮಸ್ಯೆ ಕೇವಲ ವ್ಯಕ್ತಿಯ ಸ್ಮರಣಶಕ್ತಿಗೆ ಸಂಬಂಧಿಸಿದ ಸಮಸ್ಯೆಯಲ್ಲ. ಇದರಿಂದ ಕುಟುಂಬದ ಸದಸ್ಯರೂ ಹಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ರೋಗದ ಲಕ್ಷಣಗಳು ಹಾಗೂ ಆರೈಕೆಯ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.

ದೊಡ್ಡಬಳ್ಳಾಪುರದಲ್ಲಿ ನೈಟಿಂಗೇಲ್ಸ್ ಸ್ಮೃತಿ ಗ್ರಾಮವನ್ನು ಡಿಮೆನ್ಶಿಯಾ ಆರೈಕೆ, ತರಬೇತಿ ಹಾಗೂ ಸಂಶೋಧನೆಗೆ ಸಮಗ್ರ ಕೇಂದ್ರವಾಗಿ ಸ್ಥಾಪಿಸಲಾಗುತ್ತಿದೆ. ಇಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಲಿದ್ದು, ಹಿರಿಯ ನಾಗರಿಕರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರಾಧಾಮೂರ್ತಿ ಮಾತನಾಡಿ, ಪ್ರತಿ ವರ್ಷ ಸೆ.21ರಂದು ವಿಶ್ವ ಅಲ್ಝೈಮರ್ ದಿನ ಆಚರಿಸಲಾಗುತ್ತದೆ. ದೇಶದಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಮರಣಶಕ್ತಿ ಸಮಸ್ಯೆಗಳೂ ಗಮನಾರ್ಹವಾಗುತ್ತಿವೆ. ಆದರೆ ಇದನ್ನು ಸಾಮಾನ್ಯವಾಗಿ ವಯೋಸಹಜ ಸಮಸ್ಯೆ ಎಂದು ನಿರ್ಲಕ್ಷಿಸುವುದರಿಂದ ಈ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದರು.

ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಹಲವು ವರ್ಷಗಳಿಂದ ಡೇ ಕೇರ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ಮೂಲಕ ಹಿರಿಯ ನಾಗರಿಕರಿಗೆ ಆರೈಕೆ ಮತ್ತು ಚಿಕಿತ್ಸಾ ಸೇವೆಗಳನ್ನು ಒದಗಿಸುತ್ತಿದೆ. ಶೀಘ್ರದಲ್ಲೇ ಸ್ಮೃತಿ ಗ್ರಾಮ ಆರಂಭವಾಗಲಿದ್ದು, ಅಲ್ಲಿ 100 ಹಾಸಿಗೆಗಳ ಚಿಕಿತ್ಸಾ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಉದ್ದೇಶವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಇಒ ಶಂಕರಯ್ಯ, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ವಿಜಯಾ, ಡಾ. ರಾಧಾ, ರಾಜ್ ಗೋಪಾಲ್, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅರುಣ್, ತಾಲೂಕು ಶಿಕ್ಷಣ ಸಮನ್ವಯಾಧಿಕಾರಿ ನಾರಾಯಣಸ್ವಾಮಿ, ವೈದ್ಯರಾದ ಡಾ. ಪರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಟ್ರಸ್ಟ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

11 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

17 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

18 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

24 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago