ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು State Scholarship Portal https://SSP.Karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸುವುದು ಮತ್ತು ಆನ್ ಲೈನ್ ಅರ್ಜಿ ಪ್ರತಿಯೊಂದಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ/ NPCI ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಕಚೇರಿ ದೂರವಾಣಿ ಸಂಖ್ಯೆ
1.ಜಿಲ್ಲಾ ಕಚೇರಿ, ದೇವನಹಳ್ಳಿ ದೂ.ಸಂಖ್ಯೆ 080 29787455. 2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು ದೂ ಸಂಖ್ಯೆ 9986874875. 3. ನೆಲಮಂಗಲ ತಾಲ್ಲೂಕು ದೂ ಸಂಖ್ಯೆ 8660197516. 4.ದೇವನಹಳ್ಳಿ ತಾಲ್ಲೂಕು ದೂ ಸಂಖ್ಯೆ 8861926851. 5.ಹೊಸಕೋಟೆ ತಾಲ್ಲೂಕು ದೂ ಸಂಖ್ಯೆ 7676905779. 6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…