ಕಾರ್ಮಿಕರು, ರೈತರು, ಬಡವರು, ವಿದ್ಯಾವಂತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಾಳೆ(ಏ.17) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ಪ್ರಶ್ನಿಸಿದರು.
ಪ್ರತಿಭಟನೆಗೆ ತಾಲೂಕಿನಿಂದ ಸುಮಾರು 60 ಬಸ್ ಗಳು ಹೊರಡಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.
ಈ ವೇಳೆ ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಭೂ ನ್ಯಾಯ ಮಂಡಳಿ ಸದಸ್ಯ ಆದಿತ್ಯಾ ನಾಗೇಶ್, ಅಂಜನಮೂರ್ತಿ, ಚುಂಚೇಗೌಡ, ಮಮತಾ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…