ಹೆದ್ದಾರಿಯಲ್ಲಿನ ಅವೈಜ್ಞಾನಿಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು: ಒಬ್ಬ ಪ್ರಯಾಣಿಕ ಸಾವು: ಮೂವರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ‌ ಸ್ವಿಫ್ಟ್ ಡಿಸೈರ್ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಗರದ ಪಿಎಸ್ಐ ಜಗದೀಶ್ ವೃತ್ತದ ಸಮೀಪವಿರುವ ತಿರುವಿನಲ್ಲಿ ತಡರಾತ್ರಿ ಸುಮಾರು 12:30ರ ಸಮಯದಲ್ಲಿ ನಡೆದಿದೆ.

ತುಮಕೂರು ಮೂಲದ ಸೈಮನ್‌ ಡೇವಿಡ್ (21), ಮೃತ ದುರ್ದೈವಿ.

ಫ್ಲವರ್ ಡೆಕೋರೆಟ್ ಮುಗಿಸಿಕೊಂಡು ತಡರಾತ್ರಿ 12 ಗಂಟೆ ಸಮಯದಲ್ಲಿ ಊಟ ಮಾಡಲೆಂದು ಸ್ವಿಫ್ಟ್ ಡಿಸೈರ್ ಕಾರಲ್ಲಿ ನಾಲ್ಕು ಮಂದಿ ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ ಕಾರು ಚಾಲಕ ಸೇರಿ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಾದೃಷ್ಟವಶಾತ್ ಹಿಂಬದಿ ಕುಳಿತಿದ್ದ ಒಬ್ಬ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಡಿಕ್ರಾಸ್ ಮಾರ್ಗವಾಗಿ ಪಿಎಸ್ಐ ಜಗದೀಶ್ ವೃತ್ತದ ಬಳಸಿಕೊಂಡು ಬೆಂಗಳೂರು ಕಡೆಗೆ ಹೋಗುವಾಗ ತಿರುವ ಅವೈಜ್ಞಾನಿಕವಾಗಿದ್ದು, ಇಲ್ಲಿ ತಿರುವ ಪಡೆಯಲು ವಾಹನ ಸವಾರರು ಪರದಾಡಬೇಕಾಗುತ್ತದೆ. ದಯಮಾಡಿ ವೈಜ್ಞಾನಿಕವಾಗಿ ತಿರುವ ಕಾಮಗಾರಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago