ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…