ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯಯಾತ್ರೆ’ ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ನಿಮಂತ್ ಬಿಸ್ವಾಸ್ ವಿರುದ್ಧ ಘೋಷಣೆ ಕೂಗಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ ಮಾತನಾಡಿ, ಮಣಿಪುರದಿಂದ ಆರಂಭಿಸಿದ ಭಾರತ್ ಜೋಡೋ ನ್ಯಾಯಯಾತ್ರೆಯು ಅಸ್ಸಾಂ ಪ್ರವೇಶಿಸಿದಾಗ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ಬಿಜೆಪಿ ಮುಖಂಡರು ಗೂಂಡಗಳನ್ನು ಬಿಟ್ಟು ನ್ಯಾಯಯಾತ್ರೆಗೆ ಅಡ್ಡಿಪಡಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ನಿಮಂತ್ ಬಿಸ್ವಾಸ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದಾಳಿ ಯತ್ನ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಹಿರಿಯ ಮುಖಂಡರಾದ ಸಿ.ಡಿ.ಸತ್ಯನಾರಾಯಣಗೌಡ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರ್, ಎಲ್ಲ ಮುಂಚೂಣಿ ಘಟಕಗಳ ಮುಖಂಡರು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…