Oplus_131072
ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿತ್ತು. ಆದರೆ, ವಿಮಾನ Al-171 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಾಸ್‌ಕುಮಾರ್ ಬುಚರ್ವಾಡ ಭೀಕರ ಅಪಘಾತದಿಂದ ಪವಾಡಸದೃಶವಾಗಿ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ಪತನದ ಸಮಯದಲ್ಲಿ ಸೀಟ್ ನಂಬರ್ 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ವರದಿಯಾಗಿದೆ.
ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಕೂಡ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಪೊಲೀಸರು IIA ಸೀಟಿನಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಬದುಕುಳಿದ ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮಲಿಕ್ ಹೇಳಿದ್ದಾರೆ.
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…