ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಪತನ: 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಅಪಘಾತ

ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು.

ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಬಂದಿವೆ. ಪೊಲೀಸರು ಆ ಪ್ರದೇಶದಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದು ಪ್ರಯಾಣಿಕರೋ ಅಥವಾ ಸರಕು ವಿಮಾನವೋ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

4 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

5 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

16 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago