ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು.
ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಬಂದಿವೆ. ಪೊಲೀಸರು ಆ ಪ್ರದೇಶದಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದು ಪ್ರಯಾಣಿಕರೋ ಅಥವಾ ಸರಕು ವಿಮಾನವೋ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…