ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರ ವತಿಯಿಂದ 01 ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ ದಿನಾಂಕ 13-10-2023 ರಂದು ಸಾಮರ್ಥ್ಯ ಸೌಧ, ತಾಲ್ಲೂಕು ಪಂಚಾಯ್ತಿ, ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮವು ಸುಮಾರು 60 ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ಕಾರ್ಯಕ್ರಮವು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಕಾರ್ಯಕ್ರಮಕ್ಕೆ ಭಾಗಿಯಾದ ಅಭ್ಯರ್ಥಿಗಳಿಗೆ ಟೀ, ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ :
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 7760816038
ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…