ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.
ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ ಶಿಬಿರಾರ್ಥಿಗಳು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.
ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
View Comments
Thank you sir