ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ದಿವಂಗತ ಆರ್.ಎಲ್.ಜಾಲಪ್ಪ ಅವರ 98ನೇ ಜನ್ಮದಿನಾಚರಣೆ ಅಕ್ಟೋಬರ್ 19ರಂದು ನಡೆಯಲಿದ್ದು, ಇದರ ಅಂಗವಾಗಿ ಅ.16ರ ಸೋಮವಾರ ಬೆಳಗ್ಗೆ ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದ್ದಾರೆ.
ಕೋಲಾರದ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಸಮುದಾಯ ವೈದ್ಯಶಾಸ್ತ್ರ ವಿಭಾಗ, ಶ್ರೀ ದೇವರಾಜ ಅರಸ್ ವೈದ್ಯಕೀಯ ಮಹಾವಿದ್ಯಾಲಯ, ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್, ಅಕ್ಷಯ ಲಿಯೋ ಕ್ಲಬ್‌ಗಳ ಸಹಯೋಗದಲ್ಲಿ ಶಿಬಿರ ನಡೆಯಲಿದ್ದು, ಹೃದಯದ ತೊಂದರೆ, ಮೂತ್ರಪಿಂಡ, ಶ್ವಾಸಕೋಶ, ಸ್ತ್ರೀ ರೋಗ, ಮಕ್ಕಳ ಆರೋಗ್ಯ, ಕಿವಿ ಮತ್ತು ಗಂಟಲು, ಕಣ್ಣು, ಚರ್ಮ, ದಂತ, ಮಧುಮೇಹ, ಮೂಳೆ ಮತ್ತು ಕೀಲು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಆರೋಗ್ಯ ಸಲಹೆ ಮತ್ತು ಔಷಧ ವಿತರಣೆ ನಡೆಯಲಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಲು ನಿಗದಿತ ದಿನಾಂಕದಂದು ಉಚಿತ ವಾಹನ ವ್ಯವಸ್ಥೆಯನ್ನೂ ಮಾಡಲಾಗಿದೆ.