ಅ.21 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸಿಲಿಂಗ್

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ  ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *