ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…