ಅ.22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ

ಅ.22ರ ಭಾನುವಾರ ಬೆಳಗ್ಗೆ 10ಕ್ಕೆ ನಗರದ ಕನ್ನಡ ಜಾಗೃತ ಭವನದಲ್ಲಿ ದ್ರಾವಿಡ ಸಂಸ್ಕೃತಿಯ ಮಹರಾಜ ಮಹಾದೇವ ಹರಹಂತ‌ ಮಹಿಷ ಉತ್ಸವವನ್ನ ಏರ್ಪಡಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ಪ್ರೊ.ವಿಠಲ್ ವಗ್ಗನ್ ಅವರು ಭಾಗವಹಿಸಿ ಮಹಿಷನ ಇತಿಹಾಸ ಕುರಿತು ಮಾತನಾಡಲಿದ್ದಾರೆ ಎಂದರು.

ಆಯಾ ಜಾತಿ ಜನಾಂಗಗಳ ಸಾಂಸ್ಕೃತಿಕ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಯಾರ ವಿರುದ್ಧವೂ ಈ ಆಚರಣೆಯನ್ನು ಮಾಡುತ್ತಿಲ್ಲ, ನಮ್ಮ ದ್ರಾವಿಡ ಅಸ್ಮಿತೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಲು ಮಾಡುತ್ತಿದ್ದೇವೆ ಎಂದರು.

ಮಹಿಷನ ಚರಿತ್ರೆಯನ್ನ ಅರಿತ ದ್ರಾವಿಡ ಸಂತತಿಯ ಪ್ರಗತಿಪರರು, ಚಿಂತಕರು, ಡಾ.ಬಿ.ಆರ್.ಅಂಬೇಡ್ಕರ್, ಬುದ್ದನ ಅನುಯಾಯಿಗಳು ಮೈಸೂರಿನಲ್ಲಿ ಕಳೆದ 40ವರ್ಷಗಳಿಂದಲೂ ಮಹಿಷ ಉತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಈ ನಡುವೆ ದ್ರಾವಿಡರ ಅಸ್ಮಿತೆಯನ್ನು ಗೌರವಿಸದ ಮನುವಾದಿಗಳು ನೇರವಾಗಿ ಯುದ್ಧಕ್ಕೆ ಇಳಿಯದೆ ಶೂದ್ರರನ್ನು ಅಖಾಡಕ್ಕೆ ತರುತ್ತಿದ್ದಾರೆ.  ವೈದಿಕರ ರಾಜಕೀಯ ಆಶ್ರಯದಲ್ಲಿ ಕುಳಿತಿರುವ ಇಂಥವರು ದ್ರಾವಿಡ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ.  ಅಂತಹ ಎಲ್ಲ ಅಡೆತಡೆಗಳನ್ನು ನಿವಾರಿಸುವ ಶಕ್ತಿ ದ್ರಾವಿಡರಿಗೆ ಇದೆ.  ವಿರೋಧಿಸುವುದು ಆರಂಭವೂ ಅಲ್ಲ, ಅಂತ್ಯವೂ ಅಲ್ಲ, ಅಂತಹ ವಿರೋಧಿಗಳನ್ನು ಎದುರಿಸಿ ನಿಲ್ಲುವ ಜವಾಬ್ದಾರಿ ನಮ್ಮ ಮೇಲಿದೆ.  ಹಾಗಾಗಿ ನಮ್ಮ ಸಮಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಮಹಿಷ ಉತ್ಸವ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ನಮ್ಮ ಜನಾಂಗಗಳು ಸುಶಿಕ್ಷಿತರಾಗಿದ್ದಾರೆ, ಸರಿ ತಪ್ಪುಗಳ ವಿವೇಚನೆಯ ಅರಿವಾಗಿದೆ, ಹಾಗಾಗಿ ಶೂದ್ರ ಮತ್ತು ಮೂಲ ನಿವಾಸಿಗಳ ಇತಿಹಾಸ ತಿಳಿಸಿಕೊಡುವ ಸಲುವಾಗಿ ಈ ಉತ್ಸವ ಆಚರಣೆ ಮಾಡುತ್ತಿದ್ದೇವೆ ಎಂದರು.

ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಗುರುರಾಜಪ್ಪ, ವಕೀಲರಾದ ಎಸ್.ಡಿ.ಮುನಿರಾಜು, ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ.ಯು, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಪತ್ರಕರ್ತ ರಾಜುಸಣ್ಣಕ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago