Categories: ಕೋಲಾರ

ಅ.23ರಂದು ಹೊಳಲಿ ಬಳಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್‌ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.

ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು‌ ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.

ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ,‌ ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

3 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

7 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

17 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

21 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago