ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಧು, ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…