Categories: Accident

ಅ. 24ರಂದು ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ: ಮಹಿಳೆ ಸಾವು: ತಂದೆ-ಮಗನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಧು,‌ ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.  ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago