ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ನಡೆಸುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತ ಅಕ್ಟೋಬರ್ 29 ರಂದು ಬೆಳಗ್ಗೆ 9.00 ಗಂಟೆಯಿಂದ 6.00 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರಡಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತಾರೆ.
ಅಕ್ಟೋಬರ್ 29 ರಂದು ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ ದೇವನಹಳ್ಳಿ ತಾಲ್ಲೂಕಿನಲ್ಲಿ 02 ಪರೀಕ್ಷಾ ಕೇಂದ್ರಗಳು, ಹೊಸಕೋಟೆ ತಾಲ್ಲೂಕಿನಲ್ಲಿ 03 ಪರೀಕ್ಷಾ ಕೇಂದ್ರಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 05 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳ ಸುತ್ತಲ್ಲೂ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ 200 ಮೀ. ಅಂತರದಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ