ಅ.31ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಬು ಜಗಜೀವನ ರಾಮ್ ಭವನ, ನಗರ ಪೊಲೀಸ್ ಠಾಣ ಹಿಂಭಾಗ, ದೊಡ್ಡಬಳ್ಳಾಪುರ ಟೌನ್ ಇಲ್ಲಿ ಅಕ್ಟೋಬರ್ 31 ರಂದು ಬೆಳಗ್ಗೆ 10.00 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.‌ಎನ್ ಅವರು ತಿಳಿಸಿದ್ದಾರೆ.

ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುವುದು.

ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ  ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದು ಕೊರತೆ/ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯುವುದರ ಮುಖಾಂತರ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

9 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

11 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

11 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

20 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

21 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

24 hours ago