ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಬು ಜಗಜೀವನ ರಾಮ್ ಭವನ, ನಗರ ಪೊಲೀಸ್ ಠಾಣ ಹಿಂಭಾಗ, ದೊಡ್ಡಬಳ್ಳಾಪುರ ಟೌನ್ ಇಲ್ಲಿ ಅಕ್ಟೋಬರ್ 31 ರಂದು ಬೆಳಗ್ಗೆ 10.00 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುವುದು.
ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದು ಕೊರತೆ/ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯುವುದರ ಮುಖಾಂತರ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…