ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಬೆಂಗಳೂರು ಇವರ ವತಿಯಿಂದ ಅ.5, 12, 19 ಹಾಗೂ 26ರವರೆಗೆ ಬೆಳಿಗ್ಗೆ 11ರಿಂದ ಅಪರಾಹ್ನ 3ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ ಪ್ರತಿಗಳು ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ.
ಉದ್ಯೋಗ ನೋಂದಣಿ ಮಾಡ ಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಅಥವಾ ದೂರವಾಣಿ ಸಂಖ್ಯೆ: 080-22374582, 9448220647 ಗೆ ಸಂಪರ್ಕಿಸಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…