Categories: Crime

ಆಂಟಿಯನ್ನು ತಾನೇ ಕೊಲೆ ಮಾಡಿ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ:‌ ಮಹಿಳೆಯನ್ನು ಕೊಂದು ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದಾತನ ಅರೆಸ್ಟ್

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ.

ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.

ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ.

ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು.

ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.

ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.

ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

3 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

3 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

9 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

10 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

23 hours ago