ಆಂಧ್ರದಿಂದ ಸ್ಕೂಟಿಯಲ್ಲಿ ಅಕ್ರಮ ನೀರಾ (ಹೆಂಡ) ಸಾಗಾಟ: 70 ಲೀಟರ್ ಹೆಂಡ ವಶಕ್ಕೆ

ಆಂಧ್ರಪ್ರದೇಶದಿಂದ ಅಕ್ರಮವಾಗಿ ಹೆಂಡವನ್ನು ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ )ವನ್ನು ತಂದು ಮಾರಾಟ ಮಾಡುತ್ತಿದ್ದಾಳೆ ಎಂಬ ದೂರಿನ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಆರೋಪಿಯನ್ನು ಸಾಕ್ಷಿ ಸಮೇತ ಪವಿತ್ರಳಾನ್ನು ಬಂಧಿಸಿದ್ದಾರೆ.

ಸ್ಕೂಟಿಯ ಸೀಟ್ ಕೆಳಗೆ, ಬ್ಯಾಗ್ ಹಾಗೂ ಚೀಲದಲ್ಲಿ ಸಾಗಿಸುತ್ತಿದ್ದ ಸುಮಾರು 7 ಸಾವಿರ ರೂ. ಮೌಲ್ಯದ 70 ಲೀಟರ್ ಹೆಂಡವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಪವಿತ್ರಳಾ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ತನಿಖೆ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 hour ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

3 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

3 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

8 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

10 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

23 hours ago