ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಆಂಧ್ರಪ್ರದೇಶದ ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಪ್ರಮಾಣ ವಚನ ಬೋಧಿಸಿದರು.
ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಮತ್ತು 2014 ರಿಂದ 2019 ರವರೆಗೆ ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಇದೀಗ 2024ನೇ ಸಾಲಿನಲ್ಲಿ ನಾಲ್ಕನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.
ಎನ್‌ಡಿಎ ಮೈತ್ರಿಕೂಟದ ಮುಖಂಡರು ಸೇರಿದಂತೆ ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…