ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು:‌ ಸಚಿವರಾಗಿ ಜನಸೇನೆಯ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಆಂಧ್ರಪ್ರದೇಶದ ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಪ್ರಮಾಣ ವಚನ ಬೋಧಿಸಿದರು.

ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಮತ್ತು 2014 ರಿಂದ 2019 ರವರೆಗೆ ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಇದೀಗ‌ 2024ನೇ ಸಾಲಿನಲ್ಲಿ ನಾಲ್ಕನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.  ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ಜನಸೇನೆಯ ಪವನ್ ಕಲ್ಯಾಣ್ ಮತ್ತು ನಾರಾ ಲೋಕೇಶ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

 ಎನ್‌ಡಿಎ ಮೈತ್ರಿಕೂಟದ ಮುಖಂಡರು ಸೇರಿದಂತೆ ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

14 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

16 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

21 hours ago