ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.
ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.
ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.
ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…