ಆಂಬ್ಯುಲೆನ್ಸ್ ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ: ಹಲ್ಲೆ ಆರೋಪಿತರನ್ನ ಬಂಧಿಸಿದ ಪೊಲೀಸರು

ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.

ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ  ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.

ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.

ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

30 minutes ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

15 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

20 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

23 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago