ಆಗಸ್ಟ್ 05 ರಿಂದ ಉಪ ಲೋಕಾಯುಕ್ತರ ಜಿಲ್ಲಾ ಪ್ರವಾಸ: ಸಾರ್ವಜನಿಕರ ಕುಂದುಕೊರತೆ ಆಲಿಸಿ: ಅರ್ಜಿ ಸ್ವೀಕಾರ

ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.

2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.

ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ *ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ* ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಛೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ‌.

ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.

ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *