ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ಆಗಸ್ಟ್ 28, 2025ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಕ್ಕಳಿಗೆ ಅನಾನುಕೂಲವಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ರಜೆ ಘೋಷಿಸಲಾಗಿದೆ. ಆದ್ದರಿಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ…