ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ಕರಪತ್ರ, ಆಹ್ವಾನ ಪತ್ರಿಕೆಯನ್ನು ಆಗಸ್ಟ್ 27 ರೊಳಗಾಗಿ ಮನೆ ಮನೆಗೆ ಹಂಚಬೇಕು, ಕಾರ್ಯಕ್ರಮದ ದಿನದಂದು ಫಲಾನುಭವಿಗಳಿಗೆ ಗಣ್ಯರಿಗೆ, ಬ್ಯಾಡ್ಜ್ ಗಳನ್ನು ಮುದ್ರಿಸಿ ವಿತರಿಸಲು ಕ್ರಮ ವಹಿಸಿ, ಫಲಾನುಭವಿಗಳು ಹಾಜರಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ಆಹ್ವಾನ ಪತ್ರಿಕೆ ಮನೆ ಮನೆಗೆ ವಿತರಿಸಲು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.
ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ,ಛತ್ರಗಳಲ್ಲಿ ಏರ್ಪಡಿಸಬಹುದಾಗಿದ್ದು ಕಾರ್ಯಕ್ರಮಕ್ಕೆ ಅಗತ್ಯವಾದ ಸ್ಥಳ, ಟಿವಿ, ಎಲ್.ಇ.ಡಿ ಪರದೆ, ಲ್ಯಾಪ್ ಟಾಪ್, ಇಂಟರ್ನೆಟ್ ವ್ಯವಸ್ಥೆಯನ್ನು ಸಿದ್ದಪಡಿಸಿ, ಪರಿಶೀಲಿಸಬೇಕು ಎಂದರು.
ನಗರ ವ್ಯಾಪ್ತಿಯ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ವಹಿಸಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…