ಕೋಲಾರ: ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ ಜನರ ಸಮಸ್ಯೆಗಳಿಗೆ ಒತ್ತು ನೀಡಿಲ್ಲ ಜೆಡಿಯು ಪಕ್ಷವು ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಸೇರಿದಂತೆ ಆಡಳಿತ ವ್ಯವಸ್ಥೆಯ ಸುಧಾರಣೆಗೆ ಅಧ್ಯತೆ ನೀಡಲಾಗುತ್ತಿದೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಬಗ್ಗೆ ಆರೋಪ ಪ್ರತ್ಯಾರೋಪಕ್ಕೆ ಸೀಮಿತವಾಗಬಾರದು ಬದಲಿ ವ್ಯವಸ್ಥೆಯಾಗಬೇಕು ರಾಜ್ಯದಾದ್ಯಂತ ಮಠಾಧೀಶರು, ಪದವೀಧರರು, ಪ್ರಗತಿಪರ ಚಿಂತಕರು, ಸಾಹಿತಿಗಳೊಂದಿಗೆ ಸಂವಹನದ ಮೂಲಕ ಬದಲಾವಣೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಮುಂದಿನ 2026 ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ಜೆಡಿಯು ಪಕ್ಷದಿಂದ ಕಣಕ್ಕಿಳಿಸುತ್ತಿದ್ದು ವ್ಯವಸ್ಥೆಯಲ್ಲಿನ ಪರಿವರ್ತನೆಗಾಗಿ ಪದವೀಧರರು ಸುಶಿಕ್ಷಿತರು ಸಹ ವ್ಯವಸ್ಥೆ ವಿರುದ್ಧ ನಿಂತಿದ್ದಾರೆ ಯಾವುದೇ ಪಕ್ಷಕ್ಕೆ ದೋಣಿ ಇಟ್ಟರೂ ಅದೇ ದಿಕ್ಕಿನಲ್ಲಿ ಸಾಗುತ್ತದೆ ಆದರೆ ನಾವು ಹೊಸ ದಿಕ್ಕಿನಲ್ಲಿ ಆಲೋಚನೆಗೆ ನಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು,
ಈಗಾಗಲೇ ಕೋಲಾರ ಜಿಲ್ಲೆಯ ಮುಳಬಾಗಿಲು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇವೆ ಪರಿವರ್ತನೆಯೂ ಪ್ರಾರಂಭವಾಗಿದೆ. ಈಗ ಸ್ಚರ್ಣಯುಗ ಆರಂಭವಾಗಬೇಕಿದೆ ಮುಂದೆ ರಾಜ್ಯಾದ್ಯಂತ ವ್ಯಾಪಿಸಲು ಸಾಣೇಹಳ್ಳಿಯಿಂದ ಸಂತೆಬೆನ್ನೂರಿನ ವರಗೆ ನಮ್ಮ ನಡಿಗೆ ಸರ್ವೋದಯ ಕಡೆಗೆ ಪಾದಯಾತ್ರೆ ನಡೆಯುತ್ತಿದೆ ಅದಕ್ಕೆ ಸಮಾನಮನಸ್ಕಾರು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ ನಾಗರಾಜ್ ಮಾತನಾಡಿ ಚುನಾವಣೆ ಇನ್ನೂ ಒಂದೂವರೆ ವರ್ಷವಿದೆ ಈ ಬಾರಿ ಕನಿಷ್ಠ ಮೂರು ಲಕ್ಷ ಮತದಾರರು ಮತದಾನ ಮಾಡಲಿದ್ದು ಐದು ಜಿಲ್ಲೆಯ ಪದವೀಧರ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಪಕ್ಷ ಚುನಾವಣೆಗೆ ಮಾತ್ರ ಸೀಮಿತವಲ್ಲ ಜನರ ಬಳಿ ಹೋಗಿ ಮನದಟ್ಟು ಮಾಡುತ್ತೇವೆ ಆರೋಗ್ಯ ಮತ್ತು ಶಿಕ್ಷಣ ಉಚಿತವಾಗಬೇಕು ಮತದಾರರ ನೋಂದಣಿ ಹೆಚ್ಚಿಸಬೇಕು ಕೋಲಾರದಿಂದ ಆರಂಭ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಕೆ.ಆರ್.ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದಿರಾ ಮಾತನಾಡಿ ಪಕ್ಷವು ಡಾ. ನಾಗರಾಜ್ ಅವರಿಗೆ ಬೆಂಬಲ ನೀಡಿದೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಾಗಿ ಹೋರಾಟ ಮಾಡುತ್ತಿದ್ದು ಬದಲಾವಣೆಯೇ ನಮ್ಮ ಗುರಿಯಾಗಿದೆ ಬದಲಾವಣೆ ಅಗುತ್ತದೆ ಎಂಬ ನಂಬಿಕೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಯು ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ಮಹಿಳಾ ಘಟಕದ ಸಂಚಾಲಕಿ ಕಲಾವತಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್ ಲಕ್ಷ್ಮೀ, ಯಶೋಧಾ, ಉಪಾಧ್ಯಕ್ಷ ಪ್ರಭು, ದಾವಣಗೆರೆ ಇಮ್ತಿಯಾಜ್, ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಮಹೇಶ್, ಮುಂತಾದವರು ಇದ್ದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…