ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಆಯೋಜಕರು, ತರಬೇತುದಾರರು ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಿ ಜಿಲ್ಲಾಮಟ್ಟಕ್ಕೆ, ರಾಜ್ಯಮಟ್ಟಕ್ಕೆ ಹೋಗಲು ತಯಾರು ಮಾಡಬೇಕು ಎಂದರು.
ಕ್ರೀಡೆಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾದಂತಹ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ತಯಾರಿದೆ. ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಹೊಸ ಚಿಂತನೆ ಮಾಡಲಾಗುತ್ತಿದೆ. ಹಳ್ಳಿಯ ಮಕ್ಕಳು ಅತ್ಯುತ್ತಮ ವ್ಯಾಸಂಗ ಮಾಡಬೇಕು. ಗಾಂಧಿ ಜಯಂತಿಯಂದು ಈ ಹೋಬಳಿಯಲ್ಲಿ ಒಂದು ಶಾಲೆಯನ್ನು ಗುರುತಿಸಿ ಮಾದರಿ ಶಾಲೆಯನ್ನು ಮಾಡುತ್ತೇವೆ ಎಂದರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್.ಎಸ್.ಮುನಿರಾಜು, ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಮೇಳೆಕೊಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್.ಶ್ರೀನಿವಾಸ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಡಿ.ಡಿ.ಪಿ.ಐ ಶ್ರೀಕಂಠ, ಶಿಕ್ಷಣ ಸಂಯೋಜಕರ ಮೂರ್ತಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಯಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್ ಗೌಡ, ಹಾಗು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು,
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…