ಆಡಳಿತ ನ್ಯಾಯಾಧೀಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2023ರ ಜೂನ್ 15 ರಿಂದ ಪ್ರಾರಂಭವಾಗಿ ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ.

ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

2 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

14 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

15 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

20 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

22 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

1 day ago