ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ ಹಾಕಲಾಗಿದ್ದು, ಕಳೆದ ಎರಡು ತಿಂಗಳಿಂದ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯದೆ ಸುಮಾರು 400 ವಿದ್ಯಾರ್ಥಿಗಳ ವೈದ್ಯರಾಗುವ ಕನಸು ಅತಂತ್ರವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸೋಮೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಎಸ್. ಚಂದ್ರಶೇಖರ್, “ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ ಹಾಕಿ ಎರಡು ತಿಂಗಳು ಕಳೆದರೂ ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸಂಬಂಧಪಟ್ಟವರು ತಲೆಕೆಡಿಸಿಕೊಂಡಿಲ್ಲ. ಈ ಕುರಿತು ಒಂದು ತಿಂಗಳ ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಆಯುಷ್ ಇಲಾಖೆಗೆ ದೂರು ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜು ಬಂದ್ ಆಗಿರುವುದರಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದ್ದು, ವಿದ್ಯಾರ್ಥಿಗಳ ವ್ಯಾಸಂಗ ಮುಂದುವರಿಸಲು ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು. ಅಗತ್ಯವಿದ್ದಲ್ಲಿ ಕಾಲೇಜಿನ ಆಡಳಿತ ಜವಾಬ್ದಾರಿಯನ್ನು ಬೇರೆ ಸಮರ್ಥ ಆಡಳಿತ ಮಂಡಳಿಗೆ ವಹಿಸಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.
ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಯುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸುವುದಾಗಿ ಬಿ.ಎಸ್. ಚಂದ್ರಶೇಖರ್ ಘೋಷಿಸಿದರು.
ಪ್ರತಿಭಟನೆಯಲ್ಲಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ರಮೇಶ್, ರಾಜ್ಯ ಮುಖಂಡ ಪಿ. ವಾಸು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾಯೇಗೌಡ, ತಾಲೂಕು ಅಧ್ಯಕ್ಷ ವಿನಯ್ ಆರಾಧ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು, ಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…