ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago