ಆನೇಕಲ್ ನಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದೆ. ರೌಡಿ ಶೀಟರ್ ವೆಂಕಟರಾಜು@ತುಕಡಿಯ ಕಾಲಿಗೆ ಜಿಗಣಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಜಿಗಣಿ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಅವರು ರೌಡಿ ಶೀಟರ್ ತುಕಡಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.
ಇಂದು ಸಂಜೆ ರಾಗಿಹಳ್ಳಿ ಬಳಿ ಬಂಧನಕ್ಕೆ ತೆರಳಿದ್ದ ಜಿಗಣಿ ಪೊಲೀಸ್ ಸಿಬ್ಬಂದಿ ಮೇಲೆ ರೌಡಿ ಶೀಟರ್ ವೆಂಕಟರಾಜು@ತುಕಡಿ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುಂತೆ ವಾರ್ನಿಂಗ್ ಮಾಡಲಾಗಿತ್ತು, ಆದರೆ ಪೊಲೀಸರ ಮಾತು ಕೇಳದೆ ಇದ್ದಾಗ ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಈ ರೌಡಿ ಶೀಟರ್ ಶೆಟ್ಟಿಹಳ್ಳಿ ಬಳಿ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ಈ ರೌಡಿ ಶೀಟರ್.
ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು. ಇಂದು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…