ಆನ್‍ಲೈನ್ ಗೇಮ್‍: 18 ಲಕ್ಷ ರೂ. ಲಾಸ್: ಮನನೊಂದ ಯುವಕ ನೇಣಿಗೆ ಶರಣು: ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪಿಎಂ, ಸಿಎಂಗೆ ಮನವಿ

ಆನ್‍ಲೈನ್ ಗೇಮ್‍ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.

ಮೃತ ಯುವಕ ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.

ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಡೆತ್‍ನೋಟ್‍ನಲ್ಲಿ ಗೇಮ್‍ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago