ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು, ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ.ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಅಮೇಜಾನ್ ಕಚೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟ ಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ
ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನುಕ್ಕನಹಳ್ಳಿ ಶ್ರೀರಾಮ್ ಒತ್ತಾಯಿಸಿದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…