ಆನ್ ಲೈನ್ ಖದೀಮರು ಡಿವೈಎಸ್ಪಿವೊಬ್ಬರ ಎರಡು ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.
ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು ಎಗರಿಸಲಾಗಿದೆ.
ಹಾಸನ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಡಿವೈಎಸ್‌ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.
ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.
ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.
ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ ಡಿವೈಎಸ್‌ಪಿ ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…