ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ಸಭೆ ನಡೆಸಿದರು. ನಂತರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.
ಇಂದು ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಒಂಭತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿವರಿಸಿದರು.
ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಸೇನೆ ಅತ್ಯುತ್ತಮ ಕೆಲಸ ಮಾಡಿದೆ. ಇದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದರು.
ಸಂಪುಟ ಸಭೆಯಲ್ಲಿ ಭಾರತದ ಮೂರು ಸೇನೆ ಪಡೆಗಳನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದು, ನಮ್ಮ ಸೇನೆ ಅದ್ಭುತ ಕೆಲಸ ಮಾಡಿದೆ. ಇಡೀ ದೇಶ ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ತಮ್ಮ ಸಂಪುಟಕ್ಕೆ ತಿಳಿಸಿದಾಗ ಎಲ್ಲಾ ಸದಸ್ಯರು ಮೇಜು ಬಡಿದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…