ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.
ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದು ಹೇಳಿದರು.
ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.
ಕಾಶ್ಮೀರದ ಪಹಲ್ಗಾವ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.
ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಹೇಳಿದ್ದಾರೆ.
ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದರು.
ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಹೇಳಿದರು.
ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದರು.
ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು.
ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್ ಎಂದು ಹೇಳಿದರು.
ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದರು.
ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…